ನಮ್ಮ ಬಗ್ಗೆ



ಗ್ರಾಮ ಒನ್‍ ಬ್ಯಾಸಿಗಿದೇರಿ ಕೇಂದ್ರವು ಕರ್ನಾಟಕ ಸರ್ಕಾದ ಇ-ಆಡಳಿತ ಇಲಾಖೆಯಿಂದ ಅನುಮೋದನೆ ಪಡೆದ ಅಧಿಕೃತ ನಾಗರೀಕ ಸೇವಾ ಕೇಂದ್ರವಾಗಿದೆ.ಗ್ರಾಮ ಒನ್, ಇದು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಗ್ರಾಮಗಳಲ್ಲಿಯೇ ತಲುಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ನಾಗರಿಕ ಕೇಂದ್ರಿತ ಸೇವೆಗಳಾದ ಜಿ2ಸಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು, ಆರ್ ಟಿ ಐ ಪ್ರಶ್ನೆಗಳು ಹಾಗೂ ಇನ್ನಿತರೇ ಸೇವೆಗಳನ್ನು ಗ್ರಾಮ ಮಟ್ಟದಲ್ಲಿ ಎಲ್ಲಾ ನಾಗರಿಕರಿಗೆ ತಲುಪಿಸುವ ಏಕ-ಬಿಂದು ಸಹಾಯ ಕೇಂದ್ರವಾಗಿರುವಂತೆ ಯೋಜಿಸಲಾಗಿದೆ. ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು ವರ್ಷ 2020-21 ರ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಹೀಗಿವೆ:

  • ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ,ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
  • ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ .
  • ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.
  • ಮಧ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.
  • ಪ್ರತಿ ಗ್ರಾಮಒನ್ ಕೇಂದ್ರವು ಮೈಕ್ರೋ ಬ್ಯಾಂಕಿಂಗ್ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಆರ್ಥಿಕ ಸೇರ್ಪಡೆಯನ್ನು ಸಾಧಿಸಲಾಗುತ್ತದೆ
  • ಸರ್ಕಾರದ ಸೇವೆಗಳನ್ನು ಪಡೆಯಲು ನಾಗರಿಕರು ಯಾರನ್ನೂ ಅವಲಂಬಿಸಬೇಕಾಗಿಲ್ಲವಾದ್ದರಿಂದ ಸ್ವಾವಲಂಬನಾ ಮನೋಭಾವವನ್ನು ಎತ್ತಿಹಿಡಿದಂತಾಗಿದೆ
  • ಸೇವೆಗಳ ಸಮಯೋಚಿತ ಮತ್ತು ಗುಣಮಟ್ಟದ ವಿತರಣೆಯ ಮೂಲಕ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲಾಗುತ್ತದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್ ಅನ್ನು ಹುಡುಕಿ

ಗ್ರಾಮ ಒನ್ ಕೇಂದ್ರ ಬ್ಯಾಸಿಗಿದೇರಿ         ಈ ಗ್ರಾಮ ಒನ್ ಕೇಂದ್ರವು, ಕರ್ನಾಟಕ ಸರ್ಕಾರದ  ಒಂದು ಅಧಿಕೃತ ನಾಗರೀಕ ಸೇವಾ ಕೇಂದ್ರವಾಗಿದೆ, ಈ ಕೇಂದ್ರದ ಮೂಲಕ ಅನೇಕ ರೀತಿಯ...